2,599 total views
ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಸಹಯೋಗದಲ್ಲಿ ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಕೇಂದ್ರ ಸರ್ಕಾರದ ಮುದ್ರಾ ಯೋಜನೆ, ಪಿಎಂ-ಸ್ವನಿಧಿ ಯೋಜನೆ, ಉಜ್ವಲ ಯೋಜನೆ, ಪಿ.ಎಂ-ವಿಶ್ವಕರ್ಮ ಯೋಜನೆ ಸೇರಿದಂತೆ ಇನ್ನು ಅನೇಕ ಯೋಜನೆಗಳ ಪ್ರಗತಿಯ ಪ್ರತಿ ಹಂತದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಹೇಮಂತ್ ಅವರು, ಮಾರ್ಗದರ್ಶಿ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಶ್ರೀ ಚಂದ್ರಶೇಖರ್ ಅವರು ಸೇರಿದಂತೆ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.