3,280 total views
ಶಿವಮೊಗ್ಗ : ಮಹಾತ್ಮ ಗಾಂಧೀಜಿ ಅವರ 155ನೇ ವರ್ಷದ ಜಯಂತಿಯ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು, ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕಿಯಾದ ಶ್ರೀಮತಿ ಬಲ್ಕೀಶ್ ಭಾನು ಅವರು ಸೇರಿದಂತೆ ಅನೇಕ ಗಣ್ಯರು ಮತ್ತು ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.