3,657 total views
ಮೂಡಲಗಿ: ಪಕ್ಷದ ಹೈ ಕಮಾಂಡ್ ನ ತೀರ್ಮಾನದಂತೆ ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನ ಮತ್ತು ಬೂತ ಕಮಿಟಿಗಳ ರಚನೆ ಮಾಡುತ್ತಿದ್ದು ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ತಾಲೂಕಾಧ್ಯಕ್ಷ ಪ್ರಕಾಶ್ ಕಾಳಶೆಟ್ಟಿ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಪಕ್ಷವನ್ನು ತಳಮಟ್ಟದಿಂದ ಕಟ್ಟುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವನ್ನು ಕೆಡರ್ ಬೇಸ್ ಪಾರ್ಟಿಯಾಗಿ ರೂಪಿಸಲು ನಮ್ಮ ನಾಯಕರು ಹೊರಟಿದ್ದಾರೆ ಅವರ ಕೋರಿಕೆಯಂತೆ ಮುಂದಿನ 15 ದಿನಗಳಲ್ಲಿ ಮೂಡಲಗಿ ತಾಲೂಕಿನ ಎಲ್ಲಾ ವರ್ಗದ ಜನರನ್ನು ಒಳಗೊಂಡ ವಾರ್ಡ್ ಸಮಿತಿಗಳು ರಚಿಸಲು ಹಾಗೂ ಪಕ್ಷವನ್ನು ಬಲಪಡಿಸುವ ಕೆಲಸವನ್ನು ಎಲ್ಲರೂ ಕೂಡಿ ಮಾಡುವ ಭರವಸೆ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು