2,585 total views
ಕನ್ನಡ ರಾಜ್ಯೋತ್ಸವದ ಅಂಗವಾಗಿ ಡಾ ವಿ ಬಿ ಹಿರೇಮಠ ಮೆಮೋರಿಯಲ್ ಟ್ರಸ್ಟ್ ಹಾಗೂ ಅಶ್ವಿನಿ ಪ್ರಕಾಶನ ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಗದಗಿನ ಶ್ರೀರಾಮ ಬಂಜಾರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕುಮಟಾದ ಡಾ ಏ ವಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಅರವಿಂದ ನಾಯಕ ಇವರಿಗೆ ಪಂಡಿತ್ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ ಡಾ ಅನಂತ ಕಾರ್ಕಳ ಡಾ ಎಲ್ ಪಿ ಲಮಾಣಿ ಶ್ರೀಮತಿ ಡಾ ವಿ ವಿ ಹಿರೇಮಠ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.