3,302 total views
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ 2025ರ ಅಂಗವಾಗಿ ಕಾಲೇಜ್ ಮಟ್ಟದಲ್ಲಿ ಹಲವು ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಿಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಜಿ. ಧನಂಜಯ ರವರು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸುವುದು ಕಡ್ಡಾಯ ಈ ಮೂಲಕ ಮತದಾನ ಪ್ರಕ್ರಿಯೆ ಸುಗಮವಾಗಿ ಆಗಲು ಸಹಕರಿಸಲು ಕೋರಿದೆ,ಮತದಾನ ನಮ್ಮ ಹಕ್ಕು ಯಾವುದೇ ಅರ್ಹ ಮತದಾರ ಮತದಾನದಿಂದ ದೂರ ಉಳಿದರೆ ಪ್ರಜಾಪ್ರಭುತ್ವಕ್ಕೆ ಅಪಾಯ ಆದ್ದರಿಂದ 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರು ತಮ್ಮ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿ ಮತ ಚಲಾಯಿಸಲು ತಮ್ಮ ಹಕ್ಕನ್ನು ಪಡೆದುಕೊಳ್ಳಬೇಕು. ಪ್ರಜಾಪ್ರಭುತ್ವ ಭದ್ರವಾಗಬೇಕಾದರೆ ಸುಗಮ ಆಡಳಿತಕ್ಕೆ ಪ್ರಜೆಗಳು ಸಹಕಾರ ಅತ್ಯಂತ ಮುಖ್ಯ,ಮತದಾನದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಿ ಜನತಂತ್ರ ವ್ಯವಸ್ಥೆಯನ್ನು ಬಲಗೊಳಿಸಿ ಎಲ್ಲರೂ ಮತದಾನದಲ್ಲಿ ಭಾಗವಹಿಸುವಂತೆ ಪ್ರೇರೇಪಣೆ ಮಾಡಬೇಕು ಎಂದು ತಿಳಿಸಿದರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರರಾವ್. ಜಿ.ಎಸ್. ನಿರ್ವಹಿಸಿದರು.ಈ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು.
ವರದಿ ಭರ್ಮಪ್ಪ ಮಾಗಳದ