2,633 total views
ಕುಮಟಾ:- 08-10-2024: ಜಿಲ್ಲಾ ಪಂಚಾಯಿತ ಮೈಸೂರು, ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮೈಸೂರು ಇವರು ನಡೆಸಿದ ರಾಜ್ಯಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧಾ ಕಾರ್ಯಕ್ರಮ 2024-25 ರಲ್ಲಿ ಕುಮಟಾದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ 10ನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಕೃತಿಕಾ ಮಹೇಶ ಭಟ್ಟ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಸ್ಪರ್ಧೆಯಲ್ಲಿ ಭಾಗವಹಿಸಿದ 35 ಮಂದಿಯಲ್ಲಿ ಈಕೆ ಮೊದಲ ಸ್ಥಾನ ಅಲಂಕರಿಸಿ, ಮುಂಬೈನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಸ್ಥಾನ ಗಿಟ್ಟಿಸಿ ಸಾಧನೆ ಮೆರೆದಿದ್ದಾಳೆ.
ಈಕೆಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕರು, ಶಿಕ್ಷಕ ಹಾಗೂ ಪಾಲಕವೃಂದ ಸಂತೋಷ ವ್ಯಕ್ತಪಡಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.