2,155 total views
ಮುದ್ದೇಬಿಹಾಳ ತಾಲೂಕಿನ ತಂಗಡಗಿ ಹೊರವಲಯದಲ್ಲಿ ಶೋಭಾ ಲಮಾಣಿ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಕೂಡಲೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಮಹಾಂತಗೌಡ ಆರ್ ಪಾಟೀಲ್ ಸರ್ಕಾರಕ್ಕೆ ಆಗ್ರಹ …..
ಮುದ್ದೇಬಿಹಾಳ ತಾಲೂಕಿನ ತಂಗಡಗಿ ರಸ್ತೆಯ ಹೊರ ವಲಯದ ಬಯಲು ಜಾಗದಲ್ಲಿ ಶೋಭಾ ಲಮಾಣಿ ಎಂಬ28 ವರ್ಷದ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಗುರುಪಡಿಸಬೇಕೆಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತಗೌಡ ಆರ್ ಪಾಟೀಲ್ ಹಂಗರಗಾ ಕೆ ಅವ್ರು ಆಕ್ರೋಶ ವ್ಯಕ್ತಪಡಿಸಿದರು ಇತ್ತೀಚಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಹಾಗೂ ಕೊಲೆಯ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ರಾಮರಾಜ್ಯವು ಹೋಗಿ ಕಾಮುಕರ ರಾಜವಾಗುತ್ತಿರುವುದು ಹಾಗೂ ರಾವಣ ರಾಜ್ಯವಾಗತ್ತಿರುವುದು ವಿಷಾಧಕರ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು ಅದೇ ರೀತಿಯಾಗಿ ಕೊಲೆಯಾದ ಶೋಭಾ ಲಮಾಣಿ ಅವರ ಆರು ತಿಂಗಳ ಹಸು ಕೂಸಿನ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಹಾಗೂ ಸಂತ್ರಸ್ಥರ ಕುಟುಂಬಕ್ಕೆ ಸೂಕ್ತ ಪರಿಹಾರ ಧನ ವಿತರಿಸಬೇಕು ಹಾಗೂ ಸರ್ಕಾರವು ಸಂತ್ರಸ್ಥರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಗೃಹ ಮಂತ್ರಿಗಳು ಇಂಥ ನೀಚ ಕೃತ್ಯವೇಸಗಿದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಬೇಕು. ಪೊಲೀಸ್ ಇಲಾಖೆಯವರು ಯಾವುದೇ ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ಆರೋಪಿಗಳನ್ನು ಯಾವುದೇ ಮುಲಾಜಿಲ್ಲದೆ ಬಂಧಿಸಿ ನ್ಯಾಯಲಯಕ್ಕೆ ಒಪ್ಪಿಸಬೇಕು ಸಂತ್ರಸ್ಥರ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತಗೌಡ ಆರ್ ಪಾಟೀಲ್ ಹಂಗರಗಾ ಕೆ ಅವ್ರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ