2,565 total views
ವಿಜಯಪುರ : ”ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಮತದಾರ ಪಟ್ಟ ಪ್ರಕಟಿಸಲಾಗಿದ್ದು, ಅರ್ಹ ಯುವ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ, ದೋಷಮುಕ್ತವಾಗಿ ಶುದ್ದ ಮತದಾರರ ಪಟ್ಟಿ ಸಿದ್ದಪಡಿಸಬೇಕು, ” ಎಂದು ಮತದಾರರ ಪಟ್ಟಿ ವೀಕ್ಷಕಿ ಸುಷ್ಮಾ ಗೋಡಬೋಲೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಮತದಾರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿ ಕಾರಿಗಳೊಂದಿಗೆ ಸಭೆ ನಡೆಸಿದ ಅವರು, ”ಅರ್ಹ ಯುವ ಮತದಾರರು, ವಿಶೇಷಚೇತನ ಮತದಾರರು, ಮಹಿಳೆಯರ ಹೆಸರು ಸೇರ್ಪಡೆಗೆ ಕ್ರಮ ವಹಿಸಬೇಕು,” ಎಂದರು.
‘ವಿಶೇಷವಾಗಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು ಈ ಕುರಿತು ಜಾಗೃತಿ ಮೂಡಿಸಿ ಹೆಸರು ಸೇರ್ಪಡೆಗೆ ಕ್ರಮ ವಹಿಸಬೇಕು. ವಿವಿಧ ಕಾಲೇಜುಗಳಲ್ಲಿ ಅಭಿಯಾನಗಳನ್ನು ಹಮ್ಮಿಕೊಂಡು ಯುವ ಮತದಾರರ ಹೆಸರು ಸೇರ್ಪಡೆಗೆ ಪ್ರೇರೇಪಿಸುವಂತೆ ಸೂಚಿಸಿದ ಅವರು, ಮನೆ-ಮನೆ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ದಾಖಲಿಸಬೇಕು. ಒಬ್ಬ ಮತದಾರರ ಹೆಸರು ಎರಡೂ ಕಡೆ ಇರದಂತೆ ನೋಡಿಕೊಂಡು ಶುದ್ಧ ಅಂತಿಮ ಮತದಾರರ ಪಟ್ಟಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು,” ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, | ಜಿಲ್ಲೆಯಲ್ಲಿ ಮತದಾರರ ಪರಿಷ್ಕರಣೆಗೆ ಹಮ್ಮಿಕೊಂಡ
ವಿಶೇಷ ಅಭಿಯಾನ ಕುರಿತು ಮಾಹಿತಿ ನೀಡಿದರು.
ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಪಂ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ, ಚುನಾವಣಾ ತಹಸೀಲ್ದಾರ್ ಪ್ರೇಮಸಿಂಗ
ಪವಾರ, ನಾನಾ ತಹಸೀಲ್ದಾರ್ಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿ ಕಾರಿಗಳು ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿ ಗಳಾದ ಹಾಜಿಲಾಲ ದಳವಾಯಿ, ಭೋಗೇಶ ಸೋಲಾಪುರ, ಕೆ.ಆರ್.ತೊರವಿ, ರಾಜು ಹಿರೇಮಠ ಇದ್ದರು.
ವರದಿ: ಯಮನಪ್ಪ ಚೌಧರಿ