3,674 total views
ಆಯನೂರು ಸಮೀಪದ ಮಂಜರಿಕೊಪ್ಪ, ಮಲೇಶಂಕರ ಗ್ರಾಮದ ಶ್ರೀ ಮಲೇಶಂಕರ ದೇವಸ್ಥಾನದಲ್ಲಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಾರ್ತೀಕ ಮಾಸದ ಅಮಾವಾಸ್ಯೆಯ ದಿನ, ಅಂದರೆ ಡಿಸೆಂಬರ್ 1 ನೇ ತಾರೀಕು ಭಾನುವಾರ ಅತೀ ವಿಜೃಂಭಣೆಯಿಂದ ದೀಪೋತ್ಸವ ನಡೆಯಲಿದೆ. ಆ ದಿನ ಬೆಳಿಗ್ಗೆ 11:30 ಕ್ಕೆ ರುದ್ರಾಭಿಷೇಕ ಮತ್ತು ರುದ್ರಹೋಮ, ನಂತರ ಶ್ರೀ ಸತ್ಯನಾರಾಯಣ ಪೂಜೆ ನೆರವೇರಲಿದೆ. ಸಂಜೆ 7 ಗಂಟೆಯಿಂದ ಕಾರ್ತೀಕ ದೀಪೋತ್ಸವ ನಂತರ ಅನ್ನ ಸಂತರ್ಪಣೆ ಇರುತ್ತದೆ. ಈ ಎಲ್ಲಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಗೋಪಾಲಕೃಷ್ಣ ಕಾರಂತ್ ಇವರ ನೇತೃತ್ವದಲ್ಲಿ ನೇರವೇರಲಿದೆ. ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಮಲೇಶಂಕರ ದೇವಳದ ವ್ಯವಸ್ಥಾಪನಾ ಸಮಿತಿಯವರು ಹಾಗೂ ತಹಶೀಲ್ದಾರರು ಮತ್ತು ಮುಜರಾಯಿ ಇಲಾಖೆಯವರು ವಿನಂತಿಸಿದ್ದಾರೆ.