2,565 total views
ಗೋಕರ್ಣ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ್ಕೇರಿ ಕಡಮೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯಾಧ್ಯಾಪಕರಾದ ಉಮಾ. ಜಿ ನಾಯ್ಕ ಮಾತನಾಡಿ “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ದೇಶವಾಗಿದ್ದು ಅದರ ಮೂಲಾಧಾರವೇ ನಮ್ಮ ದೇಶದ ಸಂವಿಧಾನ. ಪ್ರಜೆಗಳಾದ ನಾವು ಸಂವಿಧಾನಕ್ಕೆ ಬದ್ಧರಾಗಿ ಜೀವಿಸಬೇಕು. ವಿದ್ಯಾರ್ಥಿಗಳಾದ ನೀವು ಸಂವಿಧಾನವನ್ನು ಅರಿತು ಉತ್ತಮ ಪ್ರಜೆಗಳಾಗಿ ಬಾಳಿ” ಎಂದರು. ಡಾಕ್ಟರ್ ಬಿ.ಆರ್. ಅಂಬೇಡ್ಕರ್, ಡಾಕ್ಟರ್ ಬಾಬು ರಾಜೇಂದ್ರ ಪ್ರಸಾದ್, ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳಿಗೆ ಸಂವಿಧಾನ ವಿಷಯಕ್ಕೆ ಸಂಬಂಧಿಸಿದಂತೆ ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಶಿಕ್ಷಕರಾದ ರಾಜೀವ ಗಾಂವಕರ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಹೇಳಿಕೊಟ್ಟರು. ಶಿಕ್ಷಕರಾದ ಲತಾ ಗೌಡ, ನಯನಾ ಜಿ.ಪಿ, ವೈಶಾಲಿ ನಾಯಕ, ಸವಿತಾ ಗೌಡ, ನಾಗರತ್ನ ಗೌಡ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಈಶ್ವರ ಮಡಿವಾಳ ರವರು ವಿದ್ಯಾರ್ಥಿಗಳಿಗೆ ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದರು. ಹೀಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.