4,376 total views
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಸೀಗವಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕರಾದ ನಾರಾಯಣ್ ಅವರು ಮಾತನಾಡಿ ಖಾಸಗಿ ಶಾಲೆಗೆ ಸೇರಿಸಿದರೆ ನಿಮ್ಮ ಮಕ್ಕಳಿಗೆ ಹೆಚ್ಚು ಹೆಚ್ಚಿನ ರೀತಿಯಲ್ಲಿ ಹಣವನ್ನು ಕಟ್ಟಬೇಕಾಗುತ್ತದೆ, ಅದರ ಬದಲಿಗೆ ಸರ್ಕಾರಿ ಶಾಲೆಗೆ ಸೇರಿಸುವುದರ ಮೂಲಕ ನಿಮ್ಮ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ವಿದ್ಯಾಭ್ಯಾಸವನ್ನು ಕೊಡಿಸಿ ಎಂದು ಪೋಷಕರಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತುಳಸಿರಾಮ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ನಂದಿನಿ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರು ಹಾಗೂ ಡಿಎಸ್ಎಸ್ ಸಂಘದ ಪ್ರಧಾನ ಸಂಚಾಲಕರಾದ ಸುಧಾಕರ್, ಶಿಕ್ಷಕರಾದ ಕುಮಾರ್, ಎಚ್ ಎಮ್ ಹರೀಶ್, ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.