6,841 total views
ಕುಮಟಾ: ದಿನಾಂಕ 09- 9- 25 ರಂದು ಕುಮಟಾದ ಮಣಕಿ ಮೈದಾನದಲ್ಲಿ ನಡೆದ ಕುಮಟಾ ತಾಲೂಕು ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಮೋಘ ಸಾಧನೆಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಶಾಲೆಗೆ ಕೀರ್ತಿ ತಂದಿರುತ್ತಾರೆ.
ಕುಮಾರಿ ರುಚಿ ಮೋಹನ್ ನಾಯ್ಕ ಗುಂಡು ಎಸೆತ ಹಾಗೂ ಚಕ್ರ ಎಸೆದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣೀಯೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಕುಮಾರಿ ರಮ್ಯಾ ಸುರೇಶ ಹೆಗಡೆ ಭರ್ಚಿ ಎಸೆತ ಪ್ರಥಮ ಸ್ಥಾನ, ಕುಮಾರಿ ನಮ್ರತಾ ದೇಶ ಭಂಡಾರಿ 800 ಮೀಟರ್ ಓಟ ಪ್ರಥಮ ಸ್ಥಾನ, ಕು. ಸಹನಾ ಭಟ್ಟ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಕು. ಅರ್ಪಿತಾ ಮಂಜುನಾಥ ಗೌಡ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ, ಕುಮಾರ. ಕೆ. ಡಿ ಧ್ರುವ ಭರ್ಚಿ ಎಸೆತದಲ್ಲಿ ದ್ವಿತೀಯ, ಹುಡುಗಿಯರ ಥ್ರೋಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹುಡುಗಿಯರ ವಾಲಿಬಾಲ್ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ವಿದ್ಯಾನಿಕೇತನ ಮೂರೂರು ಕಲ್ಲಬ್ಬೆ ಸಂಸ್ಥೆಯ ಕಾರ್ಯಾಧ್ಯಕ್ಷರು, ಸರ್ವಸದಸ್ಯರು, ಪ್ರಾಂಶುಪಾಲರು, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿರುತ್ತಾರೆ.























































