![]()
ಮಲ್ಲೇಶ್ವರಂನ ಜೆ.ಎನ್. ಟಾಟಾ ಆಡಿಟೋರಿಯಂನಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ವತಿಯಿಂದ ಆಯೋಜಿಸಲಾದ ‘World Standards Day – 2025’ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಡಾ. ಸಿ.ಎನ್. ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, “ಬಿಐಎಸ್ ಪ್ರಮಾಣೀಕರಣವು ಭಾರತದ ರಾಷ್ಟ್ರೀಯ ಮಾನದಂಡ ಸಂಸ್ಥೆಯಾದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಿಂದ ನೀಡಲ್ಪಡುವ ಗುಣಮಟ್ಟದ ಪ್ರಮಾಣೀಕರಣವಾಗಿದೆ. ಇದು ಉತ್ಪನ್ನಗಳು ನಿಗದಿಪಡಿಸಿದ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಪೂರೈಸುತ್ತವೆ ಎಂಬುದನ್ನು ಖಚಿತಪಡಿಸುತ್ತದೆ,” ಎಂದು ಹೇಳಿದರು.

ಅವರು ಮುಂದುವರೆದು, “ಬಿಐಎಸ್ ಪ್ರಮಾಣೀಕರಣವು ಗ್ರಾಹಕರಿಗೆ ಉತ್ಪನ್ನದ ವಿಶ್ವಾಸಾರ್ಹತೆಯ ಭರವಸೆಯನ್ನು ನೀಡುತ್ತದೆ. ಇದರ ಮೂಲಕ ಅಪಾಯಕಾರಿ ಮತ್ತು ಅಸುರಕ್ಷಿತ ಉತ್ಪನ್ನಗಳು ಮಾರುಕಟ್ಟೆಗೆ ಪ್ರವೇಶಿಸುವುದನ್ನು ತಡೆದು, ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ,” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ MSME ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ, ಬಿಐಎಸ್ ಅಧಿಕಾರಿಗಳು, ಮಲ್ಲೇಶ್ವರಂ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಕೇಶವ್ ಎಸ್, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.


























































